ಹಳೆಯಂಗಡಿ : ಸ್ವೀಪ್ ಸಮಿತಿ ಪೂರ್ವಭಾವಿ ಸಭೆ

ಕಿನ್ನಿಗೋಳಿ : ಸಸಿಹಿತ್ಲುವಿನಿಂದ ತಲಪಾಡಿಯವರೆಗೆ ಮಾನವ ಸರಪಳಿ : ರಘು
ಮತದಾರರ ಮತದಾನದ ಬಗ್ಗೆ ಜಿಲ್ಲಾ ಸ್ವೀಪ್ ಸಮಿತಿಯು ಹಲವಾರು ಕಾರ್ಯಕ್ರಮಗಳಿಂದ ಜಾಗೃತಿ ಮೂಡಿಸಿ ಲೋಕಸಭಾ ಚುನಾವಣೆಯಲ್ಲಿ ಗರಿಷ್ಠ ಮತದಾನದ ಮುಕ್ತ ಅವಕಾಶಕ್ಕಾಗಿ ಸಸಿಹಿತ್ಲುವಿನಿಂದ ತಲಪಾಡಿಯವರೆಗೆ ಏಪ್ರಿಲ್ 7ರಂದು ಸಂಜೆ 4ರಿಂದ 6ವರೆಗೆ ಮಾನವ ಸರಪಳಿಯನ್ನು ನಿರ್ಮಿಸಲಾಗುವುದು ಎಂದು ಮಂಗಳೂರು ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಘು ಎ.ಇ. ಹೇಳಿದರು.
ಹಳೆಯಂಗಡಿಯಲ್ಲಿ ನಡೆದ ಜಿಲ್ಲಾ ಸ್ವೀಪ್ ಘಟಕದ ವಿವಿಧ ಕಾರ್ಯಕ್ರಮಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಬೃಹತ್ ಮಾನವ ಸರಪಳಿಯನ್ನು ತಲಾ ಒಂದು ಕಿಲೋ ಮೀಟರ್‌ಗೆ ಒಂದು ಸಾವಿರ ಮಂದಿಯ ಸೇರ್ಪಡೆಯೊಂದಿಗೆ ಒಟ್ಟು 40 ಸಾವಿರ ಮಂದಿಯಿಂದ ನಿರ್ಮಿಸುವ ಯೋಚನೆಯಾಗಿದೆ. ಇದರಲ್ಲಿ ಸರ್ಕಾರಿ ಅಧಿಕಾರಿಗಳ ಸಹಿತ ವಿವಿಧ ಇಲಾಖೆಯ ಸಿಬ್ಬಂದಿಗಳು, ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಕ್ತವಾಗಿ ನಾಗರಿಕರು ಭಾಗವಹಿಸಲಿದ್ದಾರೆ ಎಂದರು.
ಈ ಸಂದರ್ಭ ಸಭೆಯಲ್ಲಿ ವಿವಿಧ ರೀತಿಯ ಸಲಹೆಗಳನ್ನು ಸ್ವೀಕರಿಸಲಾಯಿತು.
ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ, ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ, ಶ್ರೀ ವಿದ್ಯಾವಿನಾಯಕ ರಜತ ಸೇವಾ ಟ್ರಸ್ಟ್, ಹಳೆಯಂಗಡಿ ಯುವತಿ ಮತ್ತು ಮಹಿಳಾ ಮಂಡಳಿ, ಲಯನ್ಸ್ ಮತ್ತು ಲಿಯೋ ಕ್ಲಬ್, ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋಟ್ಸ್ ಕ್ಲಬ್, ತೋಕೂರು ಯುವಕ ಮಂಡಲ ಮತ್ತು ಮಹಿಳಾ ಮಂಡಲ, ತೋಕೂರು ಶ್ರೀ ಗಜಾನನ ಸ್ಪೋಟ್ಸ್ ಕ್ಲಬ್, ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ, ಹಳೆಯಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿವಿಧ ಶಾಲೆಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನಿತಾ ಕ್ಯಾಥರಿನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಹಳೆಯಂಗಡಿ ಪಂಚಾಯಿತಿ ಕಾರ್ಯದರ್ಶಿ ಶ್ರಿಶೈಲ ವಂದಿಸಿದರು.

Kinnigoli-25031904

Comments

comments

Comments are closed.