ಕಿನ್ನಿಗೋಳಿ ಮಹಿಳಾ ಸಮಾವೇಶ

ಕಿನ್ನಿಗೋಳಿ : ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಶಕ್ತಿಯುತವಾಗಿ ಕಾರ್ಯ ನಿರ್ವಹಿಸಿದಲ್ಲಿ ಬಿಜೆಪಿ ಪಕ್ಷ ಗೆಲ್ಲುವುದು ಶತಸಿದ್ಧ. ಕೇಂದ್ರದ ನರೇಂದ್ರ ಮೋದಿ ಸರಕಾರ ಮಹಿಳೆಯರಿಗೆ ಆಡಳಿತ ಮಟ್ಟದಲ್ಲೂ ಸಾರ್ವಜನಿಕ ರಂಗದಲ್ಲೂ ಉತ್ತಮ ವ್ಯವಸ್ಥೆ ಹಾಗು ಯೋಜನೆಗಳನ್ನು ನೀಡಿದೆ. ಎಂದು ಚಿತ್ರ ನಟಿ ವಿಧಾನ ಪರಿಷತ್ ಸದಸ್ಯೆ ತಾರಾ ಹೇಳಿದರು.
ಗುರುವಾರ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆದ ಮುಲ್ಕಿ ಕಿನ್ನಿಗೋಳಿ ಕಟೀಲು ಶಕ್ತಿ ಕೇಂದ್ರದ ಮಹಿಳಾ ಸಮಾವೇಶದಲ್ಲಿ ಮಾತನಾಡಿದರು.
ದಕ್ಷಿಣ ಭಾರತದಲ್ಲಿ ಕರ್ನಾಟಕದ ಕರಾವಳಿ ಬಿಜೆಪಿಯ ಗರ್ಭಗುಡಿ ಹಾಗೂ ಭದ್ರಕೋಟೆಯಿದ್ದಂತೆ. ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ದೇಶವಿರೋಧಿ ಅಜೆಂಡಾ ಅಡಗಿದೆ ಎಂದರು.
ಮುಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಹಿಳೆಯರಿಗೆ ವಿಶೇಷ ಸ್ಥಾನ ಮಾನ ನೀಡಿದ ದೇಶ ಭಾರತ. ಮೂಲ್ಕಿ ಮೂಡಬಿದಿರೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆಯಲು ಮಹಿಳಾ ಕಾರ್ಯಕರ್ತರು ಶ್ರಮವಹಿಸಬೇಕು ಕೇಂದ್ರ ಸರ್ಕಾರದ ಅತಿ ಹೆಚ್ಚು ಯೋಜನೆಗಳು ಮಹಿಳಾ ಪರವಾಗಿದೆ ಎಂದು ಹೇಳಿದರು.
ಬಿಜೆಪಿ ಮೂಡಬಿದಿರೆ ಮಂಡಲ ಅಧ್ಯಕ್ಷ ಈಶ್ವರ ಕಟೀಲು ಅಧ್ಯಕ್ಷತೆ ವಹಿಸಿದ್ದರು
ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಭಟ್, ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಬಿಜೆಪಿ ಮೂಡಬಿದ್ರೆ ಮಂಡಲ ಕಾರ್ಯದರ್ಶಿಗಳಾದ ಸುಕೇಶ್ ಶೆಟ್ಟಿ ಶಿರ್ತಾಡಿ, ಜಯಾನಂದ ಮುಲ್ಕಿ, ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯೆರಾದ ವಜ್ರಾಕ್ಷಿ ಶೆಟ್ಟಿ, ಶಶಿಕಲಾ, ದ.ಕ. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ, ಮಂಗಳೂರು ನಗರ ಪಾಲಿಕೆ ಸದಸ್ಯೆ ರೂಪಾ ಡಿ ಬಂಗೇರ, ಕ್ಷೇತ್ರದ ಮಹಿಳಾ ಮೋರ್ಚದ ಅಧ್ಯಕ್ಷೆ ಲೀಲಾ ಬಂಜನ್ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ ಸ್ವಾಗತಿಸಿದರು. ರಶ್ಮೀ ಆಚಾರ್ಯ ವಂದಿಸಿದರು. ಹಳೆಯಂಗಡಿ ಬಿಜೆಪಿ ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಿತ್ರಾ ಸುಕೇಶ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು.

Kinnigoli-04041903

Comments

comments

Comments are closed.