ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ

ಕಿನ್ನಿಗೋಳಿ : ಜೀವನದಲ್ಲಿ ಕಷ್ಟಗಳು ಎದುರಾದಾಗ ಅದನ್ನು ಸವಾಲಾಗಿ ಸ್ವೀಕರಿಸಿ ಸಾಧನೆ ಮಾಡಲು ಪ್ರಯತ್ನಿಸಬೇಕು. ಅನುಭವಗಳನ್ನೇ ವೇದಿಕೆಯನ್ನಾಗಿ ಮಾಡಿಕೊಂಡು ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಮೂಡಬಿದಿರೆ ಆಳ್ವಾಸ್ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ಪ್ರಮೋದಾ ಹೇಳಿದರು.
ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸಭಾಂಗಣದಲ್ಲಿ ನಡೆದ ಹಳೆಯಂಗಡಿ ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ವಕ್ತಿತ್ವ ವಿಕಸನ ಹಾಗೂ ನಾಯಕತ್ವವನ್ನು ಯುವವಾಹಿನಿಯ ಚಿಂತನೆಯ ಮೂಲಕ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.
ಹಳೆಯಂಗಡಿ ಯುವವಾಹಿನಿ ಅಧ್ಯಕ್ಷ ಹೇಮನಾಥ್ ಬಿ. ಕರ್ಕೇರ ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ರಾಜೀವ ಪೂಜಾರಿ ನೂತನ ಅಧ್ಯಕ್ಷ ಅರುಣ್‌ಕುಮಾರ್ ಅವರ ತಂಡಕ್ಕೆ ಪ್ರತಿಜ್ಞಾ ವಿಧಿ ಭೋಧಿಸಿದರು.
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ನಾನಿಲ್, ಜಿಲ್ಲಾ ಯುವ ಪ್ರಶಸ್ತಿ ವಿಜೇತೆ ದಿವ್ಯಶ್ರಿ ರಮೇಶ್ ಕೋಟ್ಯಾನ್, ಉಪನ್ಯಾಸಕಿ ಪ್ರಮೋದಾ, ಘಟಕದ ಅಧ್ಯಕ್ಷ ಹೇಮನಾಥ್ ಬಿ. ಕರ್ಕೇರ, ಪ್ರಧಾನ ಕಾರ್ಯದರ್ಶಿ ಚಂದ್ರಿಕಾ ಪಿ. ಕೋಟ್ಯಾನ್, ಕೋಶಾಧಿಕಾರಿ ಚೇತನ್ ಎಸ್. ಸುವರ್ಣ ಅವರನ್ನು ಸನ್ಮಾನಿಸಲಾಯಿತು.
ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಗಣೇಶ್ ಜಿ. ಬಂಗೇರ, ರಮೇಶ್ ಬಂಗೇರ, ಎಚ್. ಭಾಸ್ಕರ ಸಾಲ್ಯಾನ್, ಹರೀಶ್ ಆರ್. ಅಮೀನ್, ಶರತ್‌ಕುಮಾರ್, ಬ್ರಿಜೇಶ್‌ಕುಮಾರ್, ರಾಜೇಶ್ವರೀ ರಾಮನಗರ ಉಪಸ್ಥಿತರಿದ್ದರು.

Kinnigoli-11041901

Comments

comments

Comments are closed.